ಗಂಗೊಳ್ಳಿ: ಅಲೆಗಳ ರಭಸಕ್ಕೆ ಸಿಲುಕಿ ಮುಳುಗಡೆಯಾದ ಬೋಟು: ಐವರು ಮೀನುಗಾರರ ರಕ್ಷಣೆ

ಗಂಗೊಳ್ಳಿ: ಆಳಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಅಲೆಗಳ ಒತ್ತಡಕ್ಕೆ ಸಿಲುಕಿ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿರುವ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ಮುಳುಗಡೆಯಾಗುತ್ತಿದ್ದ ಬೋಟಿನಲ್ಲಿದ್ದ ತಾಂಡೇಲಾ ನಾಗಪ್ಪ ರಾಮ ಅಂಬಿಗ, ಸಚಿನ್ ಉಲ್ಲಾಸ, ದೀಪಕ್ ಖಾರ್ವಿ, ಸುಭಾಷ್ ಗಾಂಗೇಶ್ವರ, ಸೂರಜ್ ಕುಮಾರ್ ಭಗತ್ ಅವರನ್ನು ಇನ್ನೊಂದು ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಉದ್ಯಾವರ ಸಂಪಿಗೆ ನಗರದ ಮುಹಮ್ಮದ್ ಹನೀಫ್ ಮಾಲೀಕತ್ವದ ಮನಾಲ್ ಹೆಸರಿನ ಬೋಟು ಮಲ್ಪೆಯಿಂದ ಆಳಸಮುದ್ರದ ಮೀನುಗಾರಿಕೆಗೆ ತೆರಳಿತ್ತು. […]