ಗಾಂಜಾ ಪೆಡ್ಲರ್‌ಗಳ ಬಂಧನ: 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶ
ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ಬುಧವಾರ ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ […]