ದೊಡ್ಡಣ್ಣಗುಡ್ಡೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಕೋಟಿ ಗೀತಾಲೇಖನ ಯಜ್ಞ ಅಭಿಯಾನಕ್ಕೆ ಚಾಲನೆ
ಉಡುಪಿ: ಇಲ್ಲಿನ ದೊಡ್ಡಣ್ಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಭಾವಿ ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಗಳ ಜಾಗತಿಕ ಮಟ್ಟದ ಆಧ್ಯಾತ್ಮಿಕ ಆಂದೋಲನ ಕೋಟಿ ಗೀತಾಲೇಖನ ಯಜ್ಞ ಸ೦ಕಲ್ಪ ಅಭಿಯಾನವು ಕ್ಷೇತ್ರದ ಧರ್ಮದರ್ಶಿ ಶ್ರೀರಮಾನಂದ ಗುರೂಜಿ ಲೇಖನ ದೀಕ್ಷ ಬದ್ಧರಾಗುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಶ್ರೀ ಚಕ್ರಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ನೆರವೇರಿದ ಸರಳ ಸಮಾರಂಭದಲ್ಲಿ ಮಾತನಾಡಿದ ಶ್ರೀ ಗುರೂಜಿಯವರು, ಶ್ರೀಕೃಷ್ಣ ಪರಮಾತ್ಮನ ಮುಖಕಮಲದಿಂದ ಹೊರಹೊಮ್ಮಿದ ಭಗವಾನ್ ಶ್ರೀ ವೇದವ್ಯಾಸರಿಂದ ರಚಿಸಲ್ಪಟ್ಟ ಶ್ರೀಮದ್ಭಗವದ್ಗೀತೆಯನ್ನು […]