ಗೀತಾಂಜಲಿ ಶ್ರೀ: ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಗೆದ್ದ ಪ್ರಪ್ರಥಮ ಭಾರತೀಯ ಮಹಿಳೆ
ನವದೆಹಲಿ: 64 ವರ್ಷ ವಯಸ್ಸಿನ ಹಿಂದಿ ಕಾದಂಬರಿಕಾರ್ತಿ, ಭಾರತೀಯ ಲೇಖಕಿ ಗೀತಾಂಜಲಿ ಶ್ರೀ ಮತ್ತು ಅಮೇರಿಕನ್ ಅನುವಾದಕಿ ಡೈಸಿ ರಾಕ್ವೆಲ್ ಅವರ ‘ಟಾಂಬ್ ಆಫ್ ಸ್ಯಾಂಡ್’ ಕಾದಂಬರಿಗೆ ಸಾಹಿತ್ಯ ಕ್ಷೇತ್ರದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ. ಮೂಲತಃ ಹಿಂದಿಯಲ್ಲಿ ಬರೆದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾದ ಮೊದಲ ಪುಸ್ತಕ ಇದಾಗಿದ್ದು, ಪ್ರಶಸ್ತಿಯನ್ನು ಗೊದ್ದ ಮೊದಲ ಭಾರತೀಯ ಮಹಿಳೆ ಎನ್ನುವ ಹೆಗ್ಗಳಿಕೆಗೆ ಗೀತಾಂಜಲಿ ಪಾತ್ರರಾಗಿದ್ದಾರೆ. 1947ರಲ್ಲಿ ಭಾರತ ಮತ್ತು ಪಾಕಿಸ್ತಾನದ ವಿಭಜನೆಯ […]