ಡ್ರಗ್ಸ್ ಬಗ್ಗೆ ಮಾಹಿತಿ ನೀಡಿ ಸೂಕ್ತ ಬಹುಮಾನ ಪಡೆಯಿರಿ: ಮಣಿಪಾಲ ಪೊಲೀಸರಿಂದ ಬಿಗ್ ಆಫರ್
ಉಡುಪಿ: ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕಲು ಜಿಲ್ಲಾ ಪೊಲೀಸರು ಪಣತೊಟ್ಟಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಮಣಿಪಾಲ ಠಾಣೆಯ ಪೊಲೀಸರು ವಿಭಿನ್ನ ರೀತಿಯಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾ, ಡ್ರಗ್ಸ್ ಬಗ್ಗೆ ಮಾಹಿತಿ ನೀಡಿದರೆ ಬಂಪರ್ ಕೊಡುಗೆಯ ಆಫರ್ ಘೋಷಿಸಿದ್ದಾರೆ. ಮಾದಕ ವಸ್ತು ಮಾರಾಟ ಮತ್ತು ಸೇವನೆ ಆರೋಗ್ಯಕ್ಕೆ ಹಾನಿಕರ, ಅಷ್ಟೇ ಅಲ್ಲ ಇಂದಿನ ಯುವ ಪೀಳಿಗೆ ಇದಕ್ಕೆ ಬಲಿ ಆಗಬಾರದು. ಈ ಹಿನ್ನೆಲೆಯಲ್ಲಿ ಯಾವುದೇ ಪ್ರದೇಶದಲ್ಲಿ ಗಾಂಜಾ ಅಥವಾ ಇನ್ನಿತರ ಮಾದಕ ವಸ್ತು ಮಾರಾಟ, ಸಂಗ್ರಹ […]