ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್: ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಿಸಿ ಚಾಲನೆ

ಉಡುಪಿ: ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್ ನ ಪ್ರಥಮ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಉಡುಪಿ ಮಿತ್ರ ಆಸ್ಪತ್ರೆಯ ಬಳಿಯ ವಾದಿರಾಜ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್ ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಕೊಟ್ಟಿದೆ. ಜಿಲ್ಲಾಡಳಿತಕ್ಕೆ ಅಗತ್ಯವಾಗಿ ಬೇಕಾದ ಆರೋಗ್ಯ ಉಪಕರಣಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸಿಕೊಟ್ಟಿದೆ. ಪ್ರಸ್ತುತ ಮೊದಲ ವರ್ಷವನ್ನು […]