ಬ್ರಹ್ಮಾವರ: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ
ಉಡುಪಿ: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿಯು ಪೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ. (08254) 258233, 9480805460 , ಬೈಂದೂರು […]
ಸುರತ್ಕಲ್: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ
ಸುರತ್ಕಲ್: ಇಲ್ಲಿನ ಮಣಪ್ಪುರಂ ಫೈನಾನ್ಸ್‌ನಲ್ಲಿ ಉದ್ಯೋಗದಲ್ಲಿದ್ದ ಯುವತಿ ನಾಪತ್ತೆಯಾಗಿದ್ದಾರೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ನಾಪತ್ತೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7 ಗಂಟೆಗೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ. ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಸ್ಥೆಯ ಸಿಬ್ಬಂದಿಗಳಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಯುವತಿಯ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5.6 ಅಡಿ ಎತ್ತರ, ಬಿಳಿ ಮೈಬಣ್ಣ, ದಪ್ಪಮುಖ ಹಾಗೂ ಸಾಧಾರಣ ಮೈಕಟ್ಟಿನ ಈಕೆ ತುಳು […]
ಬೆಂಗಳೂರಿನ ಬಾಲಕಿ ಮಂಗಳೂರಿನಲ್ಲಿ ನಾಪತ್ತೆ
ಮಂಗಳೂರು: ಸೋಮವಾರ ಮಂಗಳೂರಿಗೆ ಬಂದಿಳಿದಿದ್ದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಭಾರ್ಗವಿ (14) ಎಂಬ ಬಾಲಕಿ ನಾಪತ್ತೆಯಾಗಿದ್ದಾಳೆ. ಭಾರ್ಗವಿ ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದ ನಂತರದಿಂದ ನಾಪತ್ತೆಯಾಗಿದ್ದಾಳೆ. ಬಾಲಕಿಯ ಪತ್ತೆಗಾಗಿ ಪೋಷಕರು ಮನವಿ ಮಾಡಿದ್ದಾರೆ. ಬಾಲಕಿಯ ಬಗ್ಗೆ ಮಾಹಿತಿ ದೊರೆತಲ್ಲಿ ಶಶಿ: 9972031021 ಅಥವಾ ಮಹದಿ: 9916595109 ಈ ಸಂಖ್ಯೆಗೆ ಕರೆಮಾಡುವಂತೆ ಮನವಿ ಮಾಡಿದ್ದಾರೆ.
ಉಡುಪಿಯ ಯುವತಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ನಿವಾಸಿ ಭಾರತಿ ಲಮಾಣಿ (19) ಎಂಬ ಯುವತಿಯು ಮೇ 8 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಯುವತಿ ನಾಪತ್ತೆ
ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ. 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ […]