ತೀವ್ರ ಅನಾರೋಗ್ಯದ ನಡುವೆಯೂ ಕರ್ತವ್ಯ ಪ್ರಜ್ಞೆ ಮೆರೆದ ಮನೋಹರ್ ಪರಿಕ್ಕರ್ ವಿಧಿವಶ

ಪಣಜಿ: ಹಲವು ವರ್ಷಗಳಿಂದ ತೀವ್ರ ಅನಾರೋಗ್ಯ ಪೀಡಿತರಾಗಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (63)ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ನಿಧನರಾದರು. 63 ವರ್ಷದ ಮನೋಹರ್ ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅಲ್ಲದೇ ಕಳೆದ ವರ್ಷ ಅಮೆರಿಕದಲ್ಲಿ 3 ತಿಂಗಳ ಕಾಲ ಚಿಕಿತ್ಸೆ ಪಡೆದಿದ್ದ ಅವರು ಸೆ.6 ರಂದು ಚೇತರಿಸಿಕೊಂಡು ಮತ್ತೆ ತಾಯ್ನಾಡಿಗೆ ಮರಳಿದ್ದರು. ಗೋವಾ, ಮುಂಬೈ, ನವದೆಹಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರ ಮೂಗಿಗೆ ಪೈಪ್ […]