ಬಾಂಬೆ ಮಿಠಾಯಿ ಬಳಿಕ ಕೃತಕ ರಾಸಾಯನಿಕ ಬಳಸಿದ ಗೋಬಿ ಮಂಚೂರಿ ಮಾರಾಟಕ್ಕೂ ನಿಷೇಧ? ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿಷೇಧಿಸಲಾಗಿರುವ ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ನು ರಾಜ್ಯದಲ್ಲೂ ನಿಷೇಧಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದ್ದು ವರದಿ ಆರೋಗ್ಯ ಇಲಾಖೆ ಕೈ ಸೇರಿದೆ. ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ‘ರೋಡಮೈನ್‌-ಬಿ’ ಹಾಗೂ ಗೋಬಿ ಮಂಚೂರಿಯಲ್ಲಿ’ಸನ್‌ಸೆಟ್‌ ಯೆಲ್ಲೊ’ ಬಣ್ಣ ಮತ್ತು ‘ಟಾಟ್ರಾಜಿನ್‌’ ರಾಸಾಯನಿಕ ಅಂಶ […]