ಮನ್ನಾರ್ ಕೊಲ್ಲಿಯಲ್ಲಿ 20 ಕೋಟಿ ರೂ. ಮೌಲ್ಯದ 33 ಕೆಜಿ ಚಿನ್ನ ವಶ: ಭಾರತೀಯ ಕೋಸ್ಟ್ ಗಾರ್ಡ್- ಕಂದಾಯ- ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆ
ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಕಂದಾಯ- ಗುಪ್ತಚರ ನಿರ್ದೇಶನಾಲಯ ಗುರುವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನ್ನಾರ್ ಕೊಲ್ಲಿ ಪ್ರದೇಶದಲ್ಲಿ ಎರಡು ಮೀನುಗಾರಿಕಾ ದೋಣಿಗಳಿಂದ ಸುಮಾರು ₹20.2 ಕೋಟಿ ಮೌಲ್ಯದ 32.6 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಚಿನ್ನವು ಶ್ರೀಲಂಕಾದಿಂದ ಭಾರತಕ್ಕೆ ಕಳ್ಳಸಾಗಣೆಯಾಗುತ್ತಿತ್ತು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಭಾರತೀಯ ಕೋಸ್ಟ್ ಗಾರ್ಡ್‌ನ ಡೆಪ್ಯುಟಿ ಡೈರೆಕ್ಟರ್ ಜನರಲ್ (ಕಾರ್ಯಾಚರಣೆ) ಆಗಿರುವ ಇನ್ಸ್‌ಪೆಕ್ಟರ್ ಜನರಲ್ ಮನೀಶ್ ಪಾಠಕ್ ಮಾಹಿತಿ ನೀಡಿ, “ಡಿಆರ್‌ಐನಿಂದ ನಿರ್ದಿಷ್ಟ ಮಾಹಿತಿಯ ಆಧಾರದ […]