ಉಡುಪಿ ಜಿಲ್ಲೆಯಾದ್ಯಂತ ಶುಭ ಶುಕ್ರವಾರ ಆಚರಣೆ

ಉಡುಪಿ: ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು(ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾದ್ಯಂತ ಉಪವಾಸ ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ಜರುಗಿತು. ಧರ್ಮ ಪ್ರಾಂತ್ಯದ ಪ್ರಧಾನ ದೇವಾಲಯವಾದ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಢ್ ಐಸಾಕ್ ಲೋಬೊ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರುಗಳಾದ ಕೆನ್ಯೂಟ್, ಕಲ್ಯಾಣಪುರ ಪಿಲಾರ್ ಸಭೆಯ ಬ್ರಾಯನ್ ಸಿಕ್ವೇರಾ […]