ಹೋಟೆಲ್ ಗಳಿಗೆ ಸಿಹಿ ಸುದ್ದಿ: ಎಲ್‌ಪಿಜಿ ಸಿಲಿಂಡರ್ ದರದಲ್ಲಿ ₹102.50 ಇಳಿಕೆ

ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 102.50 ರೂಪಾಯಿ ಇಳಿಕೆಯಾಗಿದೆ. ಈ ಬಗ್ಗೆ ಎಎನ್‌ಐ ಟ್ವೀಟ್ ಮಾಡಿದೆ. ಈ ಮೂಲಕ ದೆಹಲಿಯಲ್ಲಿ 19 ಕೆ.ಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 1998 ರೂಪಾಯಿ ಆಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ ಎಂದು ವರದಿ ತಿಳಿಸಿದೆ.