ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ನೂತನ ಆಡಳಿತ ಸಮಿತಿ: ಮಾಜಿ ಶಾಸಕ ಗೋಪಾಲ ಪೂಜಾರಿ ಗರಂ, ಖಡಕ್ ವಾರ್ನಿಂಗ್

ಕುಂದಾಪುರ: ಸರಕಾರದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಈಗಿರುವ ವ್ಯವಸ್ಥಾಪನ ಸಮಿತಿ ರದ್ಧುಮಾಡಿ ನೂತನ ಆಡಳಿತ ಸಮಿತಿ ತರಬೇಕೆಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶದ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಪ್ರತಿಕ್ರಿಯಿಸಿದ್ದು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಆದೇಶದ ಹಿನ್ನೆಲೆ ಕಡತ ಸಿದ್ದವಾಗುತ್ತಿದ್ದು ಇನ್ನೆರಡು ದಿನಗಳಲ್ಲಿ ಪ್ರಕ್ರಿಯೆ ಪೂರ್ಣವಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೇ ಎಲ್ಲವೂ ನಡೆಯುತ್ತಿದ್ದು ಇದರಲ್ಲಿ ರಾಜಕೀಯ ದ್ವೇಷವಿಲ್ಲ. ಯಾವುದೇ […]