ಹೆಬ್ರಿ: ಸರ್ಕಾರಿ ಗೋಶಾಲಾ ವ್ಯವಸ್ಥಾಪಕರ ಹುದ್ದೆಗಾಗಿ ಅರ್ಜಿ ಆಹ್ವಾನ
ಹೆಬ್ರಿ : ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೆಬೆಟ್ಟು ಗ್ರಾಮದ ಸ.ನಂ. 79/2 ರಲ್ಲಿ ಸರ್ಕಾರಿ ಗೋಶಾಲೆಯ ನಿರ್ವಹಣೆಯನ್ನು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ನಡೆಸುವ ಕುರಿತು ಆಸಕ್ತಿಯುಳ್ಳ ಗೋಶಾಲಾ ವ್ಯವಸ್ಥಾಪಕರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನ. ಆಸಕ್ತಿಯುಳ್ಳವರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2534024 ಅನ್ನು ಅಥವಾ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 28 ರಂದು ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಾಲನೆ: ದೇಶದಲ್ಲೇ ಪ್ರಥಮ ಪ್ರಯತ್ನಕ್ಕೆ ರಾಜ್ಯ ಸರ್ಕಾರದಿಂದ ಸ್ಪಂದನೆ
ಬೆಂಗಳೂರು: ಗೋಶಾಲೆಗಳಿಂದ ಜಾನುವಾರುಗಳನ್ನು ದತ್ತು ಪಡೆಯುವುದನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಜುಲೈ 28 ರಂದು ಹಸು ದತ್ತು ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಭಮಲಾ ಚವ್ಹಾಣ್ ಹೇಳಿದ್ದಾರೆ. ”ಜಾನುವಾರುಗಳನ್ನು ಸಂರಕ್ಷಿಸಲು ಗೋಶಾಲೆಗಳಲ್ಲಿ ಅವುಗಳನ್ನು ಸಾಕುವ ಮತ್ತು ಪೋಷಣೆ ಮಾಡುವ ಉದ್ದೇಶದಿಂದ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರವು ದೇಶದಲ್ಲೇ ಪ್ರಥಮ ಬಾರಿಗೆ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭಿಸಲು ಉತ್ಸುಕವಾಗಿದೆ” ಎಂದು ಅವರು ಹೇಳಿದ್ದಾರೆ. ಜುಲೈ 28ಕ್ಕೆ ಬಸವರಾಜ […]