ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆ: ಸಮಗ್ರ ದ್ವಿತೀಯ ಸ್ಥಾನ ಪಡೆದ ಜಿಲ್ಲಾ ತಂಡ
ಉಡುಪಿ: ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮೇ 30 ರಿಂದ ಜೂನ್ 1 ರ ವರೆಗೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಜಿಲ್ಲೆಯಿಂದ ಒಟ್ಟು 76 ನೌಕರರು ಭಾಗವಹಿಸಿ, 14 ಚಿನ್ನ, 8 ಬೆಳ್ಳಿ ಹಾಗೂ 8 ಕಂಚಿನೊಂದಿಗೆ ಸಮಗ್ರ ತಂಡ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಜೇತ ಕ್ರೀಡಾಪಟುಗಳ ವಿವರ : ನ್ಯಾಯಾಂಗ ಇಲಾಖೆಯ ವಾಣಿ-ಈಜು ಸ್ಪರ್ಧೆಯಲ್ಲಿ 3 ಚಿನ್ನ, ಮಂಜುಳಾ-2 ಕಂಚು, ಲಿನಿ ಉದ್ದ […]
ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಚಿನ್ನ, ಒಂದು ಬೆಳ್ಳಿ ಪದಕ ವಿಜೇತ ಅಶ್ವಿನ್ ಸನಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಉಡುಪಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯಿಂದ ಭಾಗವಹಿಸಿದ ಅಶ್ವಿನ್ ಸನಿಲ್ ಇವರು ಪವರ್ ಲಿಫ್ಟಿಂಗ್ ಮತ್ತು ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ ಹಾಗೂ 100 ಮೀಟರ್ ಓಟದಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಮೇ 30 ರಿಂದ ಜೂನ್ 1 ರವರೆಗೆ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳ ಆಯೋಜನೆ
ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಮೇ 30 ರಿಂದ ಜೂನ್ 1 ರ ವರೆಗೆ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರೀಡಾಕೂಟವನ್ನು ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಮೇ 30 ರಂದು ಸಂಜೆ 4.30 ಕ್ಕೆ ಉದ್ಘಾಟಿಸಲಿರುವರು. ಜಿಲ್ಲೆಯಿಂದ ಆಯ್ಕೆಯಾಗಿ ಆನ್‌ಲೈನ್ ಮೂಲಕ ನೊಂದಾಯಿಸಿರುವ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರಾಕ್ ಸೂಟ್ ಮತ್ತು […]