ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಏರಿಕೆ
ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು 4% ಹೆಚ್ಚಿಸಿ ಆದೇಶ ಹೊರಡಿಸಿದೆ. 2023ರ ಜನವರಿ ತಿಂಗಳಿನಿಂದಲೇ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ಇದುವರೆಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 31 ಇದ್ದು, ಇದೀಗ ಇದು ಶೇ. 35 ಕ್ಕೆ ಏರಿಕೆಯಾಗಿದೆ.
ಏಪ್ರಿಲ್ 1 ರಿಂದ ಸರ್ಕಾರಿ ನೌಕರರರಿಗೆ ಶೇ.17ರಷ್ಟು ಮಧ್ಯಂತರ ಪರಿಹಾರ ಮಂಜೂರು: ಆದೇಶ ಹೊರಡಿಸಿದ ಸರ್ಕಾರ
ಬೆಂಗಳೂರು: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,ಪ್ರಸಕ್ತ ವರ್ಷದ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ. ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ. ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ […]
ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರೇ ಸರ್ಕಾರಿ ಸೇವೆ ಸ್ಥಗಿತ
ಉಡುಪಿ: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು. ಅವರು ಸೋಮವಾರ ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ನಡೆಯುವ ನೌಕರರ ಅರ್ನಿದಿಷ್ಟಾವಧಿ ಮುಷ್ಕರದ ರೂಪು ರೇಷೆ ಕುರಿತ ಜಿಲ್ಲೆಯ ಸರಕಾರಿ ನೌಕರರ ವಿವಿಧ […]
7 ನೇ ವೇತನ ಆಯೋಗದ ಸೌಲಭ್ಯಗಳನ್ನು ನೌಕರರಿಗೆ ದೊರಕಿಸಿ ಕೊಡಲು ರಾಜ್ಯ ಸರಕಾರಿ ನೌಕರರ ಸಂಘ ಬದ್ದ : ಸಿ.ಎಸ್.ಷಡಾಕ್ಷರಿ
ಉಡುಪಿ: ಪ್ರಸಕ್ತ ವರ್ಷದ ಡಿಸೆಂಬರ್ ನೊಳಗೆ ರಾಜ್ಯದ ಸರಕಾರಿ ನೌಕರರ ಬಹು ನಿರೀಕ್ಷಿತ 7 ನೇ ವೇತನ ಆಯೋಗದ ಸೌಲಭ್ಯಗಳನ್ನು ನೌಕರರಿಗೆ ದೊರಕಿಸುವಲ್ಲಿ ರಾಜ್ಯ ಸರಕಾರಿ ನೌಕರರ ಸಂಘ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಭರವಸೆ ನೀಡಿದರು. ಅವರು ಭಾನುವಾರದಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ ಉಡುಪಿ ಜಿಲ್ಲಾ ಸರಕಾರಿ ನೌಕರರ ವಾರ್ಷಿಕ ಸಮಾವೇಶ 2021 ಮತ್ತು ಸೇವಾ ನಿವೃತ್ತಿಗೊಳ್ಳುತ್ತಿರುವ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ […]