ಹಿರಿಯಡ್ಕ: ಆಗಸ್ಟ್ 13 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ
ಹಿರಿಯಡ್ಕ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವವು ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಆಗಸ್ಟ್ 13 ಶನಿವಾರದಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದ್ದು, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್, ಉಪಾಧ್ಯಕ್ಷೆ ಬೊಮ್ಮರಬೆಟ್ಟು ಶ್ರೀಮತಿ ಲತಾ ಸುರೇಶ್, ಬೊಮ್ಮರಬೆಟ್ಟು ಕುದಿ ವಸಂತ ಶೆಟ್ಟಿ, ಸುರೇಶ್ ನಾಯಕ್ ಉಪಸ್ಥಿತರಿರಲಿದ್ದಾರೆ. ಶ್ರೀಮತಿ ಸುಜಯಾ ಕೆ.ಎಸ್. […]