ಪೇಜಾವರ ಶ್ರೀಗಳ ನೇತೃತ್ವದಲ್ಲಿ ಉಡುಪಿಯಲ್ಲಿ ಸರ್ಕಾರಿ ಗೋಶಾಲೆ
ಉಡುಪಿ: ಗೋಹತ್ಯಾನಿಷೇಧ ಕಾನೂನು ಜಾರಿಗೆ ತಂದ ಬಳಿಕ ರಾಜ್ಯ ಸರ್ಕಾರವು ಜಿಲ್ಲಾವಾರು ಗೋಶಾಲೆಗಳನ್ನು ಸ್ಥಾಪಿಸಲು ತ್ವರಿತ ಸಿದ್ಧತೆಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲೂ ಸರ್ಕಾರಿ ಗೋಶಾಲೆ ಸ್ಥಾಪನೆಗೆ ಪಶು ಸಂಗೋಪನಾ ಇಲಾಖೆ ನಿರ್ಧರಿಸಿದ್ದು, ಈ ಕುರಿತು ಉಡುಪಿ ಪೇಜಾವರ ಮಠದಲ್ಲಿ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು. ಇಲಾಖೆಯ ಉಡುಪಿಯ ಉಪನಿರ್ದೇಶಕ ಶಂಕರ ಶೆಟ್ಟಿ, ಉಡುಪಿಯಲ್ಲಿ ಸರ್ಕಾರಿ ಗೋಶಾಲೆ ಸ್ಥಾಪನೆಯ ಕುರಿತಾಗಿ ಸರ್ಕಾರದ ಸೂಚನೆಯನ್ನು ವಿವರಿಸಿದರು . ಸದ್ರಿ ಗೋಶಾಲೆಯು ಸರ್ಕಾರದ ನಿರ್ದೇಶಾನುಸಾರವೇ ನಡೆಯಬೇಕಾಗಿದೆ. […]