ಉಡುಪಿ: ಆಗಸ್ಟ್ 14 ರಂದು ಮನೋವೈದ್ಯರ ಹುದ್ದೆಗಾಗಿ ನೇರ ಸಂದರ್ಶನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ-ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 14 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಮನೋವೈದ್ಯ ಶಾಸ್ತ್ರದಲ್ಲಿ ಎಂ.ಬಿ.ಬಿ.ಎಸ್ ಮತ್ತು ಎಂ.ಡಿ ಪದವಿ ಅಥವಾ ಮನೋವೈದ್ಯ ಶಾಸ್ತ್ರದಲ್ಲಿ ಡಿ.ಎನ್.ಬಿ ಪದವಿ ಅಥವಾ ಎಂ.ಸಿ.ಐ ನಿಂದ ಗುರುತಿಸಲ್ಪಟ್ಟ ಸಂಸ್ಥೆಯಿಂದ ಡಿ.ಪಿ.ಎಮ್ ಪದವಿ ಹೊಂದಿರುವ ಹಾಗೂ […]

ಕುಂದಾಪುರ: ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ ಹುದ್ದೆ ಖಾಲಿ 

ಕುಂದಾಪುರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆರೂರು ಹಾಗೂ ಬ್ರಹ್ಮಾವರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಖಾಲಿ ಇರುವ ಜೀವಶಾಸ್ತ್ರ ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆರೂರು ಹಾಗೂ ಬ್ರಹ್ಮಾವರ ಮೊರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪ್ರಾಂಶುಪಾಲರನ್ನು ಅಥವಾ ಮೊ.ನಂ: 7022713447 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಮಂಗಳೂರು: ಸರ್ಕಾರಿ ವಕೀಲರ ಹುದ್ದೆಗಾಗಿ ಅರ್ಜಿ ಅಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರ್ಕಾರ ನಿರ್ಧರಿಸಿದ್ದು, ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯ ಕಾನೂನು ಶಾಖೆಯಲ್ಲಿ ಅರ್ಜಿ ಪಡೆದು, ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿ ಸಲ್ಲಿಸಬೇಕು. ವಿಶೇಷ ಅರ್ಹಹತೆಗಳಿದ್ದರೆ […]

ಸ್ಟಾಫ್ ಸೆಲೆಕ್ಷನ್ ಕಮೀಷನ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಮತ್ತು ಸಹಾಯಕ ಲೆಕ್ಕ ಪತ್ರ ಅಧಿಕಾರಿ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಹಾಗೂ https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಮೇ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]

ದೀಪಾವಳಿಗೆ ಭರ್ಜರಿ ಉಡುಗೊರೆ: 75,000 ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತದ ಸುಮಾರು 75,000 ಯುವಕರು ಮತ್ತು ಅವರ ಕುಟುಂಬಗಳಿಗೆ ದೀಪಾವಳಿಯನ್ನು ವಿಶೇಷವಾಗಿಸಿದ್ದು, ಅಕ್ಟೋಬರ್ 22 ರಂದು ಯುವಕರಿಗೆ ಅವರ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಪಟ್ಟಿ ಮಾಡಲಾದ ಯುವಕರಿಗೆ ಪ್ರಧಾನಿ ಮೋದಿ ವರ್ಚುವಲ್ ಕಾರ್ಯಕ್ರಮದ ಮೂಲಕ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಪ್ರಧಾನ ಮಂತ್ರಿಗಳ ಕಚೇರಿಯು ಎಲ್ಲಾ ಸಚಿವಾಲಯಗಳಿಗೆ ಆಯಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಪತ್ತೆಹಚ್ಚಲು ಮತ್ತು ನಿಗದಿತ ಸಮಯದಲ್ಲಿ ಭರ್ತಿ ಮಾಡಲು ಹೇಳಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. […]