ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬೆರಳಚ್ಚು-ನಕಲುಗಾರ ಹುದ್ದೆ
ಉಡುಪಿ: ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು- ನಕಲುಗಾರ -3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://districts.ecourts.gov.in/udupi-onlinerecruitment ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು […]
ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಡುಪಿ: ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅರ್ಹ ಅಭ್ಯರ್ಥಿಗಳು https://ssc.nic.in ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಜೂನ್ 16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅನುಮಾನಗಳಿದ್ದಲ್ಲಿ ಸಹಾಯವಾಣಿ 080- 25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ. 9945856670, 8105618291 ಮತ್ತು 8197440155 ನ್ನು ಸಂಪರ್ಕಿಸುವಂತೆ […]
ಮಹಿಳೆಯರಿಗೆ ಸಿಹಿ ಸುದ್ದಿ: ಹೊರಗುತ್ತಿಗೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕೊಡುವ ಮಹತ್ವದ ಕ್ರಮವಾಗಿ, ಹೊರಗುತ್ತಿಗೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಶುಕ್ರವಾರ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಸರ್ಕಾರವು ನಿಯಮಿತವಾಗಿ ಚಾಲಕರು, ಡೇಟಾ ಎಂಟ್ರಿ ಆಪರೇಟರ್‌ಗಳು, ಹೌಸ್‌ಕೀಪಿಂಗ್ ಸಿಬ್ಬಂದಿ ಮತ್ತು ಗ್ರೂಪ್ ‘ಡಿ’ ಕಾರ್ಮಿಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುತ್ತದೆ. ಈ ಎಲ್ಲಾ ಕೆಲಸಗಳನ್ನು ನಿಭಾಯಿಸಲು ಮಹಿಳೆಯರು ಸಮಾನವಾಗಿ ಸಮರ್ಥರಾಗಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಸೂಚಿಸಿದಂತೆ […]