ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗುವುದು: ಸಿಎಂ ಬೊಮ್ಮಾಯಿ
ಉಡುಪಿ: ಜಿಲ್ಲೆಯ ಜನರ ಹಲವು ದಶಕಗಳ ಬೇಡಿಕೆಯಂತೆ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಅದೇ ರೀತಿ ಸರ್ಕಾರ ಇತ್ತೀಚಿಗೆ ರೂಪಿಸಿದ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜುಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯೂ ಇದೆ. ಅದರಂತೆ ಜಿಲ್ಲೆಗೆ ಪಿಪಿಪಿ ಮಾದರಿಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. 200 ಬೆಡ್ ಗಳ ಬಿಆರ್ ಎಸ್ ಆಸ್ಪತ್ರೆಯನ್ನು ಸರ್ಕಾರವೇ […]