ಕೃಷಿ ವಿರೋಧಿ ಮಸೂದೆಗಳನ್ನು ಅಂಗೀಕರಿಸಿ, ರೈತರಿಗೆ ಮರಣ ಶಾಸನ ಬರೆಯಲು ಸರ್ಕಾರ ಹೊರಟಿದೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು: ರೈತರಿಗೆ ಮರಣ ಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲವಂತದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾವನ್ನು ನಿಯಂತ್ರಿಸಲಾಗದೆ ದೇಶದ ಜನರನ್ನು ಸಾವು-ನೋವಿನ ದವಡೆಗೆ ನೂಕುತ್ತಿರುವ ಅಸಮರ್ಥ ಸರ್ಕಾರವು, ಇದೇ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಕೊರೊನೋತ್ತರ ಭಾರತದ ಏಕೈಕ ಆಶಾಕಿರಣವಾದ ಕೃಷಿ […]