ನಿಗದಿತ ಕಾಲಮಿತಿಯೊಳಗೆ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ: ಕೋಟ ಶ್ರೀನಿವಾಸ್ ಪೂಜಾರಿ
ಉಡುಪಿ: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇದನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಕಾಲಮಿತಿಯೊಳಗೆ ತಲುಪಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ, ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಪ್ರಸ್ತುತ ಸಾಲಿನಲ್ಲಿ ಆಯವ್ಯಯ ಮೊತ್ತದಲ್ಲಿ […]