ಯುವ ಜನತೆ ವಿಶ್ವ ಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಶ್ರಮಿಸಬೇಕಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್

ಮೂಡುಬಿದಿರೆ: ವಿದ್ಯಾರ್ಥಿಗಳ ಶಾರೀರಿಕ, ಆಧ್ಯಾತ್ಮಿಕ, ಭೌದ್ಧಿಕ ಅಭಿವೃದ್ಧಿಯು ವಿದ್ಯಾರ್ಥಿಗಳನ್ನು ಹಾಗೂ ದೇಶವನ್ನು ಸಮರ್ಥ ನಿಟ್ಟಿನಲ್ಲಿ ಸಾಗಿಸಲು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೇಳಿದರು. ಭಾರತ್ ಸ್ಕೌಟ್ಸ್ ಗೈಡ್ಸ್ `ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ-2022’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತದ ಮೊದಲ ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕರ್ನಾಟಕದ ಮೂಡುಬಿದಿರೆಯ ಆಳ್ವಾಸ್‌ನಲ್ಲಿ ನಡೆಯುತ್ತಿರುವುದು ಸಂತೋಷದ ವಿಷಯ. ಸಮಾಜದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಸ್ಕೌಟ್ಸ್ ಗೈಡ್ಸ್ ನ ಸೇವೆ ಅಪಾರ. ಭಾರತ ಯುವ ಜನತೆಯ ದೇಶ, […]