ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಮತ್ತು ಸಹಾಯಕ ಲೆಕ್ಕ ಪತ್ರ ಅಧಿಕಾರಿ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಅಕ್ಟೋಬರ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.