ಕಾನೂನನ್ನು ಕೈಗೆ ತೆಗೆದುಕೊಂಡರೆ ಅಥವಾ ಹಿಂಸೆಗಿಳಿದರೆ ಸರ್ಕಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ನಮ್ಮದು ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರ. ಕಾನೂನು ಸುವ್ಯವಸ್ಥೆ ಮತ್ತು ಸಮಾನತೆ ಎಂಬ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕಳಿಸಿಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಉಡುಪಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಕಾನೂನಿನ ಪ್ರಕಾರ ನಡೆಯುವುದು ನಮ್ಮ ಕೆಲಸ ಮಂಗಳೂರಿನಲ್ಲಿ ಲವ್ ಜಿಹಾದ್ ಬಗ್ಗೆ ಹಿಂದೂ ಟಾಸ್ಕ್ […]