ಕೋವಿಡ್‌ ನಿಂದ ಮೃತರಾದ ರಾಜ್ಯದ 31 ಪತ್ರಕರ್ತರಿಗೆ ಸರಕಾರದಿಂದ ಪರಿಹಾರ: ತಗಡೂರು

ಉಡುಪಿ: ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಸುಮಾರು 70 ಮಂದಿ ಮೃತಪಟ್ಟಿದ್ದು, ಇದರಲ್ಲಿ ಮೊದಲ ಅಲೆಯಲ್ಲಿ ಮೃತಪಟ್ಟ ಒಟ್ಟು 31 ಮಂದಿ ಪತ್ರಕರ್ತರ ಕುಟುಂಬಗಳಿಗೆ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಹಾಗೂ ಎರಡು ಕುಟುಂಬಗಳಿಗೆ ಮನೆ ಒದಗಿಸುವಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶ್ರಮಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಉಡುಪಿ ಜಿಲ್ಲೆಗೆ ಅಧಿಕೃತವಾಗಿ ಭೇಟಿ ನೀಡಿದ ಹಿನ್ನೆಲೆಯಲ್ಲಿ ಇಂದು ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರನ್ನುದ್ದೇಶಿಸಿ ಮಾತನಾಡುತಿದ್ದರು. ರಾಜ್ಯದಲ್ಲಿ ಸುಮಾರು […]