ಗ್ರಾಮ ಪಂಚಾಯತ್ ಉಪ ಚುನಾವಣೆ: ಸಂತೆ, ಜಾತ್ರೆ ನಿಷೇಧ
ಉಡುಪಿ: ಉಡುಪಿ ತಾಲೂಕು ಅಲೆವೂರು ಗ್ರಾಮ ಪಂಚಾಯತ್ ಉಪ ಚುನಾವಣೆಗೆ ಸಂಬಂಧಿಸಿದಂತೆ, ಮೇ 20 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಚುನಾವಣೆ ನಡೆಯುವ ದಿನದಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.