ಪಕ್ಕಾಸಿಗೆ ಚೂಡಿದಾರದ ಶಾಲು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
ವೇಣೂರು: ಮನೆಯ ಪಕ್ಕಾಸಿಗೆ ಚೂಡಿದಾರದ ಶಾಲು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಕತ್ತೋಡಿಬೈಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ವೇಣೂರು ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿ ಸೌಮ್ಯಾ (19) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದು, ಲಾಕ್‌ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದಳು ಎನ್ನಲಾಗಿದೆ. ಇಂದು ಬೆಳಿಗ್ಗೆ ಎದ್ದು ಉಪಹಾರ ಸೇವಿಸಿದ್ದ ಸೌಮ್ಯ ಬಳಿಕ […]