ಪೆರ್ಡೂರು ಗ್ರಾಪಂನಲ್ಲಿ ಅಭಿವೃದ್ಧಿ ಕಾರ್ಯ ನಿಂತು ಹೋಗಿದ್ದು, ಆಡಳಿತ ವ್ಯವಸ್ಥೆ ನಿಷ್ಕ್ರಿಯಗೊಂಡಿದೆ: ಗ್ರಾಪಂ ಉಪಾಧ್ಯಕ್ಷ ಚೇತನ್ ಶೆಟ್ಟಿ ಆರೋಪ

ಪೆರ್ಡೂರು: ಪೆರ್ಡೂರು ಗ್ರಾಪಂ ಅಧ್ಯಕ್ಷರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಡತಗಳ ಕೆಲಸ ಕಾರ್ಯಗಳು ಆಗದೆ ಸಾರ್ವಜನಿಕರು ನಿತ್ಯ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಸಾಮಾನ್ಯ ಸಭೆ, ಕ್ರಿಯಾಯೋಜನೆ ತಯಾರಾಗದೆ ಕಳೆದ ಒಂದು ತಿಂಗಳಿನಿಂದ ಗ್ರಾಪಂ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ಪೆರ್ಡೂರು ಗ್ರಾಪಂ ಉಪಾಧ್ಯಕ್ಷ ಚೇತನ್ ಶೆಟ್ಟಿ ಆರೋಪಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದೆ. ಜನರ ಪರ ನಿಲ್ಲಬೇಕಾದ ಸ್ಥಳೀಯಾಡಳಿತ, ಜನಪ್ರತಿನಿಧಿಗಳು ರಾಜಕೀಯ ಮಾಡುತ್ತಿದ್ದಾರೆ. […]