ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಸಾಧ್ಯತೆ
ಬೆಂಗಳೂರು: ಇದೇ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. 5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ ಎನ್ನಲಾಗಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. […]