ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಭುಗಿಲೆದ್ದ ಹಿಂಸಾಚಾರ; ಮತಗಟ್ಟೆ ಧ್ವಂಸಗೊಳಿಸಿದ ದುಷ್ಕರ್ಮಿಗಳು
ಕೋಲ್ಕತಾ: ಪಂಚಾಯತ್ ಚುನಾವಣೆಗೆ ಮತದಾನ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಉತ್ತರ 24 ಪರಗಣಗಳ ಪಿರ್ಗಾಚಾ ಪಂಚಾಯತ್‌ನಲ್ಲಿ ಶನಿವಾರ ಮುಂಜಾನೆ ಹಿಂಸಾಚಾರ ಪ್ರಾರಂಭವಾಗಿದೆ. ಶುಕ್ರವಾರ ರಾತ್ರಿ ಟಿಎಂಸಿ ಕಾರ್ಯಕರ್ತರ ಥಳಿತದಿಂದಾಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕೂಚ್‌ಬಿಹಾರ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡು ಹಾರಿಸಲಾಗಿದ್ದು, ತೀವ್ರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 44, 45, ನೂರ್ಪುರ್ ಪಂಚಾಯತ್ ನ ಮತಪೆಟ್ಟಿಗೆಗಳನ್ನು ಒಯ್ದು ಮತ ಪತ್ರಗಳನ್ನು ಹಾಳುಮಾಡಲಾಗಿದೆ. ಇಂದು ಮುಂಜಾನೆ ದಿನ್ಹಟಾ ಬ್ಲಾಕ್ ನಂಬರ್ 1 ಮತಗಟ್ಟೆಗೆ ನುಗ್ಗಿದ ಯನ್ನು […]
ಗ್ರಾಮ ಪಂಚಾಯತ್ ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ಜುಲೈ 12 ಕೊನೆ ದಿನ; ಜುಲೈ 23 ರಂದು ಚುನಾವಣೆ
ಉಡುಪಿ: ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅದರಂತೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮ ಪಂಚಾಯತ್- ಹಿಂದುಳಿದ ವರ್ಗ ಅ, ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್- ಸಾಮಾನ್ಯ ಮಹಿಳೆ ಹಾಗೂ ಕುಂಭಾಶಿ ಗ್ರಾಮ ಪಂಚಾಯತ್‌ನ ಅನುಸೂಚಿತ ಪಂಗಡ ಮಹಿಳೆ ತಲಾ 1 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗಧಿಪಡಿಸಿ ಜಿಲ್ಲಾಧಿಕಾರಿ […]
ಜಿ.ಪಂ/ತಾ.ಪಂ ಚುನಾವಣೆ ಕರಡು ಮತದಾರರ ಪಟ್ಟಿ ಆಕ್ಷೇಪಣೆ ಇತ್ಯರ್ಥಕ್ಕೆ ಜುಲೈ 7 ಕೊನೆ ದಿನ
ಉಡುಪಿ: ಜಿಪಂ ಮತ್ತು ತಾಪಂ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ , ಉಡುಪಿ ಕಾಪು ಕಾರ್ಕಳ ಕುಂದಾಪುರ ಬೈಂದೂರು ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕು ಕಚೇರಿಗಳಲ್ಲಿ ಸಹಾಯಕ ಆಯುಕ್ತರು ಕುಂದಾಪುರ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 4 ಹಾಗೂ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜುಲೈ 7 ಕೊನೆಯ ದಿನವಾಗಿದ್ದು , ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆ […]
ಗ್ರಾಮ ಪಂಚಾಯತ್ ಉಪ ಚುನಾವಣೆಯ ವೇಳಾಪಟ್ಟಿ ಪ್ರಕಟ
ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯತ್‌ಗಳ ಸದಸ್ಯ ಸ್ಥಾನಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಹಾಗೂ ಖಾಲಿ ಉಳಿದಿರುವ ಗ್ರಾಮ ಪಂಚಾಯತ್‌ಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಜಿಲ್ಲೆಯ ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮ ಪಂಚಾಯತ್ ಹಾಗೂ ಕುಂದಾಪುರ ತಾಲೂಕು ಕುಂಭಾಶಿ ಗ್ರಾಮ ಪಂಚಾಯತ್‌ನ ತಲಾ ಒಂದು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಫೆಬ್ರವರಿ […]
ಅಕ್ಟೋಬರ್ 28 ರಂದು ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಸಂತೆ-ಜಾತ್ರೆ ನಿಷೇಧ
ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಯಡ್ತಾಡಿ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಮತ್ತು ಕಾಪು ತಾಲೂಕು ಮುದರಂಗಡಿ ಗ್ರಾಮ ಪಂಚಾಯತ್‌ನ ಸದಸ್ಯ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಮತದಾನದ ದಿನದಂದು ಈ ಮೇಲ್ಕಂಡ ವ್ಯಾಪ್ತಿಯ ಪ್ರದೇಶಗಳಲ್ಲಿ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ […]