ಮಾರ್ಚ್ 1 ರಿಂದ ಕಪ್ಪು ಬಟ್ಟೆ ಧರಿಸಿ ಸೇವೆ ನೀಡಲಿರುವ ಗ್ರಾಮ ಪಂಚಾಯತ್ ನೌಕರರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಂತಿಯುತ ಪ್ರತಿಭಟನೆ

ಬೆಂಗಳೂರು: ರಾಜ್ಯಮಟ್ಟದಲ್ಲಿ ಪಂಚಾಯತ್ ನೌಕರರು ಮಾರ್ಚ್ 1 ರಿಂದ ತಮಗಾದ ನೋವು, ಶೋಷಣೆ ಮತ್ತು ಸಮಸ್ಯೆಗಳ ವಿರುದ್ದ ಸಾರ್ವಜನಿಕ ಸೇವೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕಚೇರಿಯಲ್ಲಿ ಸಾರ್ವಜನಿಕವಾಗಿ ಕಪ್ಪು ಬಟ್ಟೆ/ ಕಪ್ಪು ಪಟ್ಟಿ ಧರಿಸಿ ಇಲಾಖೆಯಿಂದ ಬೇಡಿಕೆ ಈಡೇರುವವರೆಗೂ ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೋಭಿವೃದ್ದಿ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ ತಿಳಿಸಿದ್ದಾರೆ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿಗಳು ಹಲವಾರು ವರ್ಷಗಳಿಂದ ಸಂಘಟನೆಯ […]

ಬ್ರಹ್ಮಾವರ: ಗ್ರಾಮಪಂಚಾಯತ್ ಅಧ್ಯಕ್ಷ/ ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪಟ್ಟಿ ಪ್ರಕಟ

ರಾಜ್ಯ ಚುನಾವಣಾ ಆಯೋಗ  ನಿಗದಿಪಡಿಸಿರುವ ಮೀಸಲಾತಿಯಂತೆ  ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ  27 ಗ್ರಾಮ ಪಂಚಾಯತಿಗಳ 30 ತಿಂಗಳ ಎರಡನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ / ಉಪಾಧ್ಯಕ್ಷ ಸ್ಥಾನ ಮೀಸಲಾತಿಯನ್ನು  ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ. ಕ್ರ.ಸಂ.  ಗ್ರಾಮ ಪಂಚಾಯತ್ ಹೆಸರು     ಅಧ್ಯಕ್ಷ                             ಉಪಾಧ್ಯಕ್ಷ 1             1-ಕೋಟತಟ್ಟು        […]

ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿ ಸಭೆ

ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸಲು ಜೂನ್ 17 ರಂದು ಬೆಳಗ್ಗೆ 10.30 ಕ್ಕೆ ಬ್ರಹ್ಮಾವರ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಹತ್ತಿರದ ಹೋಟೆಲ್ ಆಶ್ರಯ ಚಂದಮ್ಮ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ, ಜೂ. 19 ರಂದು ಬೆಳಗ್ಗೆ 10.30 ಕ್ಕೆ ಹೆಬ್ರಿ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಹೆಬ್ರಿ ಶ್ರೀ ಅನಂತ ಪದ್ಮನಾಭ ಸನ್ನಿಧಿ ಸಭಾಭವನ, ಜೂ. 20 ರಂದು ಬೈಂದೂರು ತಾಲೂಕಿನ ಗ್ರಾಮ ಪಂಚಾಯತ್ […]

ಗ್ರಾಮಪಂಚಾಯತ್ ತೆರಿಗೆ ಪಾವತಿಗೆ ಡಿಜಿಟಲ್ ವ್ಯವಸ್ಥೆ ಕಡ್ಡಾಯ: ಪ್ರಸನ್ನ ಹೆಚ್

ಉಡುಪಿ: ಸಾರ್ವಜನಿಕರು ಗ್ರಾಮ ಪಂಚಾಯತ್‌ಗಳಿಗೆ ವಿವಿಧ ತೆರಿಗೆ, ಶುಲ್ಕ ಸೇರಿದಂತೆ ಮತ್ತಿತರ ದರಗಳನ್ನು ಶನಿವಾರದಿಂದ ಕಡ್ಡಾಯವಾಗಿ ಡಿಜಿಟಲ್ ವ್ಯವಸ್ಥೆಯ ಮೂಲಕ ಪಾವತಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ತಿಳಿಸಿದರು. ಅವರು ಉಡುಪಿ ತಾಲೂಕಿನ ಕಲ್ಯಾಣಪುರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ನಗದು ರಹಿತ ವ್ಯವಹಾರಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಜನ ಸಾಮಾನ್ಯರು ವಿವಿಧ ತೆರಿಗೆಗಳು, ಶುಲ್ಕಗಳು, ದರಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ನಗದು ರಹಿತವಾಗಿ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ನಗದು […]

ಅಲೆವೂರು ಉಪಚುನಾವಣೆಯಲ್ಲಿ ಬಿಜೆಪಿ ಜಯ; ಮತದಾರ ಬಿಜೆಪಿ ಪರವೆಂದು ಮತ್ತೊಮ್ಮೆ ಸಾಬೀತು: ಶ್ರೀಕಾಂತ್ ನಾಯಕ್

ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ಕೊರಂಗ್ರಪಾಡಿ 3ನೇ ವಾರ್ಡಿನ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಂಕರ್ ಪಾಲನ್ ಎದುರಾಳಿ ಅಭ್ಯರ್ಥಿಯ ಎದುರು 67 ಮತಗಳಿಂದ ಜಯಗಳಿಸಿದ್ದು, ಮತದಾರರು ಬಿಜೆಪಿ ಪರವಾಗಿದ್ದರೆನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಹೇಳಿದ್ದಾರೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಹಾಗೂ ನೂರಾರು ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಶತಪ್ರಯತ್ನ ಮಾಡಿದರೂ ಯಶಸ್ಸು ಸಿಗಲಿಲ್ಲ. […]