ಪ. ಬಂಗಾಳ ಪಂಚಾಯತ್ ಚುನಾವಣೆ: ಅತ್ಯಾಧಿಕ ಗ್ರಾಮ ಪಂಚಾಯತ್ ಗಳನ್ನು ತೆಕ್ಕೆಗೆ ಹಾಕಿಕೊಂಡ ತೃಣಮೂಲ ಕಾಂಗ್ರೆಸ್; ಎರಡನೇ ಸ್ಥಾನದಲ್ಲಿ ಬಿಜೆಪಿ

ಕೊಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳದಾದ್ಯಂತ ಒಟ್ಟು 63,229 ಗ್ರಾಮ ಪಂಚಾಯಿತಿ ಸ್ಥಾನಗಳಲ್ಲಿ 42,097 ಸ್ಥಾನಗಳನ್ನು ಗೆದ್ದಿದೆ ಎಂದು ರಾಜ್ಯ ಚುನಾವಣಾ ಆಯೋಗದ (ಎಸ್‌ಇಸಿ) ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಬಿಜೆಪಿ 9,223 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇತರರಲ್ಲಿ, ಎಡರಂಗ 3,021 ಸ್ಥಾನಗಳನ್ನು ಗೆದ್ದುಕೊಂಡರೆ, ಕಾಂಗ್ರೆಸ್ 2,430 ಸ್ಥಾನಗಳನ್ನು ಪಡೆದುಕೊಂಡಿದೆ. ಇತರೆ ಹಾಗೂ ಸ್ವತಂತ್ರ ಅಭ್ಯರ್ಥಿಗಳು 2,866 ಸ್ಥಾನಗಳನ್ನು ಗೆದ್ದಿದ್ದಾರೆ. ಗ್ರಾಮ ಪಂಚಾಯಿತಿಗಳ ಸಂಖ್ಯೆಗೆ ಸಂಬಂಧಿಸಿದಂತೆ, ಒಟ್ಟು 3,317 ರಲ್ಲಿ 2,562 ರಲ್ಲಿ ಟಿಎಂಸಿ ಗೆದ್ದಿದೆ. […]