ಗ್ರಾಪಂ ಚುನಾವಣೆ ನಾಯಕರನ್ನು ರೂಪಿಸುವ ವೇದಿಕೆ: ಪ್ರಮೋದ್ ಮಧ್ವರಾಜ್

ಉಡುಪಿ: ಭವಿಷ್ಯದ ನಾಯಕರನ್ನು ರೂಪಿಸಲು ಗ್ರಾಮ ಪಂಚಾಯತ್ ಚುನಾವಣೆ ಉತ್ತಮ ವೇದಿಕೆಯಾಗಿದೆ. ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ನಾಯಕರಾಗಲು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕರ್ತರಿಗೆ ಕರೆನೀಡಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆ ಕುರಿತ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೆಪಿಸಿಸಿ ಸಂಯೋಜಕ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ವಿನಯ ರಾಜ್ ಮಾತನಾಡಿ, ಸಿದ್ಧರಾಮಯ್ಯನವರ ನೇತೃತ್ವ ದ ಕಾಂಗ್ರೆಸ್ ಸರಕಾರ […]