ಬೆಳ್ಮಣ್: ಫೆಬ್ರವರಿ 20 ರಂದು ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ

ಬೆಳ್ಮಣ್: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಹಶೀಲ್ದಾರರು ಕಂದಾಯ ಅಧಿಕಾರಿಗಳೊಂದಿಗೆ ಫೆಬ್ರವರಿ 20 ರಂದು ಬೆಳಗ್ಗೆ 10.30 ಕ್ಕೆ ಬೆಳ್ಮಣ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೂಡ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸೂಡ ಗ್ರಾಮದ ಗ್ರಾಮಸ್ಥರು ಕಂದಾಯ, ಪಂಚಾಯತ್ ರಾಜ್, ಆಹಾರ, ಸರ್ವೇ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದಲ್ಲಿ ಅದನ್ನು ನೀಡಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಹಾಗೂ ಸದ್ರಿ ಇಲಾಖೆಗಳಡಿ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳ ಮಾಹಿತಿಯನ್ನು […]

ಸರಕಾರಿ ಅಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸರಕಾರವು ಸಾರ್ವಜನಿಕರ ಅಭಿವೃದ್ದಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡು ಆ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಹಲವು ಯೋಜನೆಗಳ ಸಮಗ್ರ ಮಾಹಿತಿ ಪಡೆಯಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರದಂದು ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಗೀತಾ ಮಂದಿರದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರ […]

ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ ಮುಂದೂಡಿಕೆ

ಉಡುಪಿ: ಕಾರ್ಕಳ ತಾಲೂಕು ಇರ್ವತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನವೆಂಬರ್ 19 ರಂದು ಆಯೋಜಿಸಲಾಗಿದ್ದ ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನ. 19 ರಂದು ಬೆಳ್ಳೆ ಗ್ರಾಮದಲ್ಲಿ ಡಿಸಿ ಗ್ರಾಮ ವಾಸ್ತವ್ಯ

ಉಡುಪಿ: ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳೆ ಗ್ರಾಮದ ಗೀತಾಮಂದಿರ ಇಲ್ಲಿ ನವೆಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಯಲಿದ್ದು, ಬೆಳ್ಳೆ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 19 ರಂದು ಇರ್ವತ್ತೂರಿನಲ್ಲಿ ಕಾರ್ಕಳ ತಹಶೀಲ್ದಾರ್ ಗ್ರಾಮವಾಸ್ತವ್ಯ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಾಲೂಕು ತಹಶೀಲ್ದಾರರು ನವೆಂಬರ್ 19 ರಂದು ಇರ್ವತ್ತೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದು, ಇರ್ವತ್ತೂರು ಗ್ರಾಮದ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.