ವೀಕೆಂಡ್ ಕರ್ಪ್ಯೂಗೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಬೆಂಬಲ

ಉಡುಪಿ: ಕೋವಿಡ್-19 ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂಗೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಉಡುಪಿ, ಕುಂದಾಪುರ, ಕಾರ್ಕಳ ನಗರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ಸಾರ್ವಜನಿಕರು ಮನೆಯಿಂದ ಹೊರಬಾರದೇ ಮನೆಗಳಲ್ಲೇ ಲಾಕ್ ಆಗಿದ್ದಾರೆ. ವಾಹನ ಸಂಚಾರವೂ ಸಂಪೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯ ಬಸ್ ಗಳು ಸಂಚಾರ ನಡೆಸಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರಬಂದಿಲ್ಲ. ಕುಂದಾಪುರ […]