ರಾಜ್ಯದಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು: ಸಚಿವ ಸುನಿಲ್ ಕುಮಾರ್
ಉಡುಪಿ: ರಾಜ್ಯದಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಉಡುಪಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಅವರು ಸಂದೇಶವನ್ನು ನೀಡಿದರು. ರಾಜ್ಯದಲ್ಲಿ ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆಯನ್ನು ಆದಷ್ಟು ಕಡಿಮೆ ಮಾಡಿ ಪರಿಸರ ಸ್ನೇಹಿಯಾದ ಸೌರಶಕ್ತಿ ಮತ್ತು ವಿಂಡ್ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲು […]