ಗ್ರೀಸ್ ದೇಶದ ಹಲವಾರು ಕಡೆಗಳಲ್ಲಿ ಭೀಕರ ಕಾಳ್ಗಿಚ್ಚು: 19 ಸಾವಿರ ಜನ ಸ್ಥಳಾಂತರ

ಅಥೆನ್ಸ್ (ಗ್ರೀಸ್) : ಗ್ರೀಸ್ನ 82 ಸ್ಥಳಗಳಲ್ಲಿ ವ್ಯಾಪಿಸಿರುವ ಕಾಳ್ಗಿಚ್ಚು ನಂದಿಸಲು ಅಗ್ನಿಶಾಮಕ ಪಡೆಗಳು ಹರಸಾಹಸ ಪಡುತ್ತಿವೆ. ಈ ಪೈಕಿ ಭಾನುವಾರದಂದು 64 ಸ್ಥಳಗಳಲ್ಲಿ ಹೊಸದಾಗಿ ಕಾಳ್ಗಿಚ್ಚು ಕಾಣಿಸಿಕೊಂಡಿದೆ. ರಾತ್ರಿ ಸಮಯದಲ್ಲಿ ಅಗ್ನಿಶಾಮಕ ವಿಮಾನ ಹಾಗೂ ಹೆಲಿಕಾಪ್ಟರ್ಗಳು ಸಂಚರಿಸಲು ಸಾಧ್ಯವಾಗದ ಕಾರಣದಿಂದ ಅಗ್ನಿಶಾಮಕ ಪಡೆ ಸಿಬ್ಬಂದಿಗೆ ಬೆಂಕಿ ನಂದಿಸುವುದು ಸವಾಲಾಗಿದೆ. ಗ್ರೀಸ್ ದೇಶದ ಹಲವಾರು ಕಡೆಗಳಲ್ಲಿ ಕಾಣಿಸಿಕೊಂಡ ಭೀಕರ ಕಾಳ್ಗಿಚ್ಚು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ 12 ಗ್ರಾಮಗಳಿಂದ ಜನರ ಸ್ಥಳಾಂತರ: 12 ಗ್ರಾಮಗಳು ಮತ್ತು […]