ಸೆ. 21ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್: ಷರತ್ತುಗಳಿಗೆ ಈ ಸುದ್ದಿ ನೋಡಿ
ನವದೆಹಲಿ: ಶಾಲಾ-ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ಸ್ವಯಂ ಪ್ರೇರಿತರಾಗಿ ವಿದ್ಯಾರ್ಥಿಗಳು ಬಂದರೆ ಸೆಪ್ಟೆಂಬರ್ 21ರಿಂದ 9 ತರಗತಿಯಿಂದ ದ್ವಿತೀಯ ಪಿಯುಸಿ ತರಗತಿಗಳನ್ನು ಭಾಗಶಃ ಪುನರಾರಂಭಿಸಬಹುದು ಎಂದು ಇಂದು ಪ್ರಕಟಿಸಿದ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅನುಕೂಲ ಮಾಡಿಕೊಡಲಾಗಿದ್ದು, ಶಾಲೆಗಳಲ್ಲಿ ನಿರ್ದಿಷ್ಟ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಯಲ್ಲಿ ಶೇ. 50 ರಷ್ಟು ಮಾತ್ರ ಬೋಧಕ, ಬೋಧಕೇತರ ಸಿಬ್ಬಂದಿ ಇರಬೇಕು ಎಂದು ತಿಳಿಸಿದೆ. ಶಾಲೆಗೆ […]