ಗ್ರಾಹಕರ ಕಣ್ಣು ಕತ್ತಲೆ ಬರಿಸುತ್ತಿದೆ ಗೃಹಜ್ಯೋತಿ: ವಿದ್ಯುತ್ ಬಳಕೆ ಹೆಚ್ಚಳದಿಂದ ಬಿಲ್ ನಲ್ಲಿ ಏರಿಕೆ ಕಂಡು ಜನ ಶಾಕ್

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ನಿರಂತರವಾಗಿ ಏರುತ್ತಿದ್ದು, ಕಳೆದ ವರ್ಷದ ಫೆಬ್ರುವರಿ–ಮಾರ್ಚ್‌ಗಿಂತ ಈ ಬಾರಿ ಗೃಹ ವಿದ್ಯುತ್ ಬಳಕೆ ಶೇ 30ರಷ್ಟು ಹೆಚ್ಚಳವಾಗಿದೆ. ಇದೀಗ ಗೃಹ ಜ್ಯೋತಿ ಫಲಾನುಭವಿಗಳಿಗೆ ಇದರ ಬಿಸಿ ತಟ್ಟಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ನಿಯಮಗಳ ಪ್ರಕಾರ ಸೌಲಭ್ಯ ಪಡೆದಿರುವ ಕುಟುಂಬಗಳು ಹಿಂದಿನ ಒಂದು ವರ್ಷ ಬಳಸಿದ್ದ ಸರಾಸರಿ ಯೂನಿಟ್‌ ಹಾಗೂ ಅದರ ಮೇಲೆ 10 ಹೆಚ್ಚುವರಿ ಯೂನಿಟ್‌ ಮಾತ್ರ ಉಚಿತವಾಗಿ ಪಡೆಯಬಹುದಾಗಿದೆ. ಅದಕ್ಕಿಂತ ಎಷ್ಟು ಹೆಚ್ಚು ಬಳಕೆ ಮಾಡಲಾಗುತ್ತದೆಯೋ ಅಷ್ಟು […]

ಉಡುಪಿ: ಇಂದು ಗೃಹಜ್ಯೋತಿ ಯೋಜನೆಗೆ ಚಾಲನೆ

ಉಡುಪಿ: ಇಂಧನ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕುಂಜಿಬೆಟ್ಟು ಕ.ವಿ.ಪ್ರ.ನಿ.ನಿ ನೌಕರರ ಸಂಘದ ಸಭಾಭವನದಲ್ಲಿ ಚಾಲನೆ ನೀಡಲಾಗುವುದು. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ […]

ಆಗಸ್ಟ್ 1 ರಂದು ಗೃಹ ಜ್ಯೋತಿ; ಆಗಸ್ಟ್ 17 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ಬಹುನಿರೀಕ್ಷಿತ ಕಾಂಗ್ರೆಸ್ ಗ್ಯಾರಂಟಿಯ ಐದು ಯೋಜನೆಗಳ ಅಧಿಕೃತ ಜಾರಿಗೆ ಕ್ಷಣಗಣನೆ ನಡೆಯುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ‘ಗೃಹ ಜ್ಯೋತಿ’ ಉಚಿತ ವಿದ್ಯುತ್ ಯೋಜನೆಗೆ ಚಾಲನೆ ನೀಡಿದರೆ, ಆಗಸ್ಟ್ 17 ಅಥವಾ 18 ರಂದು ಕುಟುಂಬದ ಮುಖ್ಯಸ್ಥರೆಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಮಾಸಿಕ 2,000 ರೂ.ಗಳ ಸಹಾಯವನ್ನು ನೀಡುವ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಕಾಂಗ್ರೆಸ್‌ನ ಐದು ಚುನಾವಣಾ ಗ್ಯಾರಂಟಿಗಳ ಭಾಗವಾಗಿರುವ ಎರಡೂ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು […]