ಜುಲೈ 19 ರಿಂದ ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಪ್ರಾರಂಭ: ನೋಂದಾಯಿಸುವ ಮಾಹಿತಿ ಇಲ್ಲಿದೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಜುಲೈ 19 ರಂದು ಪ್ರಾರಂಭವಾಗಲಿದೆ. ನೋಂದಣಿ ಉಚಿತವಾಗಿದ್ದು ಅರ್ಜಿ ಸಲ್ಲಿಸಲು ಯಾವುದೇ ಗಡುವು ಇಲ್ಲ. ಪಡಿತರ ಚೀಟಿಯಲ್ಲಿ (ಬಿಪಿಎಲ್, ಎಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ಗಳು) ನಮೂದಿಸಿರುವಂತೆ ಕುಟುಂಬದ ಮಹಿಳೆಯು ಅರ್ಹ ಫಲಾನುಭವಿಯಾಗುತ್ತಾರೆ. ಆದಾಗ್ಯೂ, ಮಹಿಳೆ ಅಥವಾ ಆಕೆಯ ಪತಿ ತೆರಿಗೆದಾರರಾಗಿರಬಾರದು (ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರು). ಈ ಯೋಜನೆಯ ಮೂಲಕ 1.28 ಕೋಟಿ ಕುಟುಂಬಗಳು ಪ್ರಯೋಜನ ಪಡೆಯಲಿವೆ. ಫಲಾನುಭವಿಯು ಪಡಿತರ ಚೀಟಿ […]

ಮನೆಯೊಡತಿಯರಿಗೆ ಸದ್ಯಕ್ಕಿಲ್ಲ ಲಕ್ಷ್ಮೀ ಕಟಾಕ್ಷ: ಗೃಹಲಕ್ಷ್ಮೀ ಯೋಜನೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಅರ್ಜಿದಾರರು ಎದುರಿಸುತ್ತಿರುವ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸಲು ಗೃಹಲಕ್ಷ್ಮಿ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಪಕ್ಷದ ಚುನಾವಣಾ ಖಾತರಿಗಳಲ್ಲಿ ಒಂದಾಗಿದ್ದು, ಇದು ರಾಜ್ಯಾದ್ಯಂತ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ ನೀಡುವ ವಾಗ್ದಾನ ಹೊಂದಿದೆ. ಯೋಜನೆ ಅನುಷ್ಠಾನಕ್ಕೆ ವಿರಾಮ ನೀಡುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ. ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಭ್ರಷ್ಟಾಚಾರ ಮುಕ್ತ ವಾತಾವರಣವನ್ನು […]

ಇಂದಿನಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ. ಈ […]

ಗೃಹ-ಲಕ್ಷ್ಮಿ ಯೋಜನೆ: ಹಣ ಪಡೆಯಲು ಅತ್ತೆಗೆ ಅರ್ಹತೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂ ನೀಡುವ ಭರವಸೆ ನೀಡಿತ್ತು. ಆದರೆ ಇದೀಗ ಈ ಯೋಜನೆಯನ್ವಯ 2000 ರೂ ಪಡೆಯಲು ಅತ್ತೆ-ಸೊಸೆಯರಲ್ಲಿ ತಿಕ್ಕಾಟ ನಡೆಯುತ್ತಿರುವ ಪ್ರಸಂಗಗಳು ವರದಿಯಾಗುತ್ತಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪ್ರಣಾಳಿಕೆಯಲ್ಲಿ ಸ್ಪಷ್ಟತೆಯ ಕೊರತೆ ಇದ್ದು, ಕುಟುಂಬದ ಯಜಮಾನಿಯಾದ ಮಹಿಳೆಗೆ ಮಾತ್ರ ಪ್ರತೀ ತಿಂಗಳು 2000 ರೂ ನೀಡುವ ಬಗ್ಗೆ ಭರವಸೆ ನೀಡಲಾಗಿತ್ತು. […]