ಗೃಹಲಕ್ಷ್ಮಿ ಯೋಜನೆಗಾಗಿ ನೋಂದಣಿ ಕೇಂದ್ರಗಳ ಸ್ಥಾಪನೆ
ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಉಡುಪಿ ನಗರಸಭಾ ಕಚೇರಿ ಹಾಗೂ ನಗರಸಭೆಯ ಮಲ್ಪೆ, ಪುತ್ತೂರು, ಮಣಿಪಾಲ ಮತ್ತು ಹೆರ್ಗಾ ಉಪಕಚೇರಿಗಳಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಯೋಜನೆಯಡಿ ನೋಂದಾಯಿಸಿಕೊಳ್ಳಲು ಅರ್ಹರಿರುವ ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಮಹಿಳಾ ಫಲಾನುಭವಿಗಳು ಸದರಿ ಕೇಂದ್ರಗಳಲ್ಲಿ ನೋಂದಾಯಿಸಿ, ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಜಿಲ್ಲೆಯಲ್ಲಿ 2.58 ಲಕ್ಷ ಫಲಾನುಭವಿಗಳು
ಉಡುಪಿ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿಯವರ ಸೂಚನೆ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ವ್ಯಾಪ್ತಿಯ ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಈ ಯೋಜನೆಗೆ ಅರ್ಹರು. ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ ಪಾವತಿದಾರರಾಗಿದ್ದರೆ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ. ಲಿಂಗತ್ವ ಅಲ್ಪಸಂಖ್ಯಾತರು ಈ ಯೋಜನೆಯ ಲಾಭ […]
ಆಗಸ್ಟ್ 1 ರಂದು ಗೃಹ ಜ್ಯೋತಿ; ಆಗಸ್ಟ್ 17 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ
ಬೆಂಗಳೂರು: ಬಹುನಿರೀಕ್ಷಿತ ಕಾಂಗ್ರೆಸ್ ಗ್ಯಾರಂಟಿಯ ಐದು ಯೋಜನೆಗಳ ಅಧಿಕೃತ ಜಾರಿಗೆ ಕ್ಷಣಗಣನೆ ನಡೆಯುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ‘ಗೃಹ ಜ್ಯೋತಿ’ ಉಚಿತ ವಿದ್ಯುತ್ ಯೋಜನೆಗೆ ಚಾಲನೆ ನೀಡಿದರೆ, ಆಗಸ್ಟ್ 17 ಅಥವಾ 18 ರಂದು ಕುಟುಂಬದ ಮುಖ್ಯಸ್ಥರೆಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಮಾಸಿಕ 2,000 ರೂ.ಗಳ ಸಹಾಯವನ್ನು ನೀಡುವ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಕಾಂಗ್ರೆಸ್‌ನ ಐದು ಚುನಾವಣಾ ಗ್ಯಾರಂಟಿಗಳ ಭಾಗವಾಗಿರುವ ಎರಡೂ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು […]