ಉಡುಪಿ: ನಾಳೆ(ಆ. 30) ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ನಗರಸಭೆ ಇವರ ಸಹಯೋಗದಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಸಮಾರಂಭವು ಆಗಸ್ಟ್ 30 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಕಿನ್ನಿಮುಲ್ಕಿ ಮಿಷನ್ ಕಂಪೌಂಡ್‌ನ ಬಾಸೆಲ್ ಮಿಷನರಿಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ […]

ಗೃಹಲಕ್ಷ್ಮಿ ಯೋಜನೆ: ಯಾವುದೇ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ; ನಿಗದಿತ ಕೇಂದ್ರಗಳಲ್ಲೇ ಅರ್ಜಿ ಸಲ್ಲಿಕೆ

ಉಡುಪಿ: ಜು. 22ರಿಂದ ಗೃಹ ಲಕ್ಷ್ಮೀ ಯೋಜನೆಗೆ ನಿಮ್ಮ ಸಮೀಪದ ಯಾವುದೇ ಗ್ರಾಮ ಒನ್ ಸೇವಾ ಕೇಂದ್ರ, ಗ್ರಾಮ ವನ್ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು. ನಿನ್ನೆ ಮೊಬೈಲಿಗೆ ಬಂದ ಮೆಸೇಜಿನಲ್ಲಿ ನಿಗದಿತ ದಿನದಂದು ನಿಗದಿತ ಸಮಯಕ್ಕೆ ಸೂಚಿಸಿದ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶ ರದ್ದಾಗಿದೆ. ಇನ್ನು ಮುಂದೆ ನಿಮ್ಮ ಜಿಲ್ಲಾ ವ್ಯಾಪ್ತಿಯ ಯಾವುದೇ ಗ್ರಾಮ ಒನ್ ಸೇವಾ […]