ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ: ಬಾಕಿ ವೇತನ ಪಾವತಿಸಲು ಸಿಎಂ ಅಸ್ತು

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 14,447 ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದರು. ಅವರು ಮಂಗಳವಾರ ವಿಧಾನ‌ ಪರಿಷತ್‌ನಲ್ಲಿ ಅತಿಥಿ ಉಪನ್ಯಾಸಕರ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು. ಕೊರೊನಾ ಲಾಕ್‌ಡೌನ್ ಕಾರಣದಿಂದ ಕಾಲೇಜುಗಳು ಮುಚ್ಚಿವೆ. ಮಾರ್ಚ್ ತಿಂಗಳವರೆಗೆ ಎಲ್ಲ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಲಾಗಿದೆ. ಏಪ್ರಿಲ್‌ನಿಂದ ಆಗಸ್ಟ್ ವರೆಗಿನ ವೇತನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ […]