ಆರ್‌ಎಸ್‌ಎಸ್ ನಾಯಕ ರುದ್ರೇಶ್ ಕೊಲೆಗಾರ ಮೊಹಮ್ಮದ್ ಘೌಸ್ ನಯಾಜಿ ಬಂಧನ: ದ. ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರ

ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪದಾಧಿಕಾರಿಯನ್ನು ಕೊಂದ ಆರೋಪಿ ಮೊಹಮ್ಮದ್ ಘೌಸ್ ನಯಾಜಿಯನ್ನು ಬಂಧಿಸಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಿಷೇಧಿತ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಕ್ರಿಯ ಸದಸ್ಯ ನಯಾಜಿ 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಆರ್ ರನ್ನು ಸಂಚು ರೂಪಿಸಿ ಹತ್ಯೆಗೈದಿದ್ದ. 35 ವರ್ಷದ ರುದ್ರೇಶ್ ಆರ್‌ಎಸ್‌ಎಸ್‌ನ ಶಿವಾಜಿನಗರ ಶಾಖೆಯ ಮಂಡಲ ಅಧ್ಯಕ್ಷ ಮತ್ತು ಬಿಜೆಪಿ ಶಿವಾಜಿನಗರ ಕಾರ್ಯದರ್ಶಿಯಾಗಿದ್ದರು. ಘಟನೆಯ ನಂತರ, […]