ಎ.17ರಂದು ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ: 25 ಸಾವಿರ ಮಂದಿ ಭಾಗಿ

ಕಾಪು: ಕಾಪು‌‌ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಬಿಜೆಪಿ ಅಭ್ಯರ್ಥಿಯಾಗಿ ಎ.17ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಸುರೇಶ್ ಶೆಟ್ಟಿ ಗುರ್ಮೆ ತಿಳಿಸಿದರು. ಶನಿವಾರ ಕಾಪು ಕೆ ಒನ್ ಹೊಟೇಲ್ ಸಭಾಂಗಣದಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.17ರಂದು ಬೆಳಗ್ಗೆ 10 ಗಂಟೆಗೆ ಕಾಪು ಶ್ರೀ ಜನಾರ್ದನ‌‌ ದೇವಸ್ಥಾನದಲ್ಲಿ ಸಮಾವೇಶ ನಡೆಯಲಿದ್ದು, 25 ಸಾವಿರ ಮಂದಿ ಭಾಗವಹಿಸಲಿದ್ದಾರೆ. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಪ್ರದಾನ ಭಾಷಣ ಮಾಡಲಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, […]