ಡಾ. ದೇವದಾಸ್ ಕಾಮತ್ ಅವರ ಅಭಿನಂದನಾ ಕಾರ್ಯಕ್ರಮ: ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಹಿರಿಯಡಕ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜು. 31 ರಂದು ನಡೆದ IMA-KSB DOCTORS DAY AWARD – 2023 ಪ್ರಶಸ್ತಿ ಪುರಸ್ಕೃತ ಡಾ. ದೇವದಾಸ್ ಕಾಮತ್ ಅವರ ಅಭಿನಂದನಾ ಸಮಾರಂಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಬಿ.ಎಲ್ ವಿಶ್ವಾಸ್ ಭಟ್, ಅಮೋಘ (ರಿ.) ಹಿರಿಯಡಕದ ನಿರ್ದೇಶಕಿ ಪೂರ್ಣಿಮಾ ಸುರೇಶ್, ಶಾಲಾ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾಪು: ಮಹಾಲಕ್ಷ್ಮಿ ಅತಿಥಿ ಗೃಹ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಇಲ್ಲಿನ ಹಳೆ ಮಾರಿಗುಡಿ ದೇವಸ್ಥಾನದ ಬಳಿ ಹೊಸದಾಗಿ ನಿರ್ಮಾಣಗೊಂಡಿರುವ ಮಹಾಲಕ್ಷ್ಮಿ ಅತಿಥಿ ಗೃಹ ಇದರ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಬಳಿಕ ದೇವಸ್ಥಾನದ ಇ-ಹುಂಡಿಗೆ ಚಾಲನೆ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಅಡಿಕೆ ಬೆಳಗಾರರ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬೆಂಗಳೂರು: ಕರ್ನಾಟಕ ರಾಜ್ಯ ಅಡಿಕೆ ಸಹಕಾರಿ ಸಂಘಗಳ ಸಹಕಾರ ಮಹಾಮಂಡಳಿ ಶಿವಮೊಗ್ಗ ಇದರ ನೇತೃತ್ವದಲ್ಲಿ ಜು. 20 ರಂದು ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆ, ಅಡಿಕೆ ಬೆಳೆಗೆ ಬರುವ ರೋಗಗಳ ಬಗ್ಗೆ ಮತ್ತು ಅಡಿಕೆ ಬೆಳೆಯ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳ ಬಗ್ಗೆ ಚರ್ಚಿಸಲಾಯಿತು.

ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಶಿರ್ವ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಶನಿವಾರ ಭೇಟಿ ನೀಡಿದರು. ಸಮುದಾಯ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಗಳ ಬಗ್ಗೆ ಹಾಗೂ ಇತರೆ ಕುಂದು ಕೊರತೆಯ ಬಗ್ಗೆ ಚರ್ಚಿಸಿ ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಕಾಳಜಿ ವಹಿಸಿ ಮತ್ತು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗಲಿರುವುದರಿಂದ ಈ ಬಗ್ಗೆ ಸೂಕ್ತ ಮುಂಜಾಗ್ರತ ಕ್ರಮ ವಹಿಸುವಂತೆ ವೈದ್ಯಾಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಆಚಾರ್ಯ, ಶಿರ್ವ ಗ್ರಾಮ […]

ಕಾಪು: ಕಡಲ್ಕೊರೆತ ಪ್ರದೇಶಗಳ ಪರಿಶೀಲನೆ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ತಾಲೂಕಿನ‌ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಸಹಾಯಕ ಅಭಿಯಂತರ ಜಯರಾಜ್, […]