ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ ನಿಮಿತ್ತ ದೇವಿ ಸಾನಿಧ್ಯ ಪ್ರತಿಷ್ಠೆ
ಕಾಪು: ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು 35 ಕೋಟಿ ರೂ. ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಜೂ.12 ರಂದು ಸೋಮವಾರ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ ಮತ್ತು ವಿವಿಧ ಉಪಸಮಿತಿಗಳು ಹಾಗೂ ಎಲ್ಲಾ ಸಮಾಜಗಳ […]
ಬಸವರಾಜ್ ಬೊಮಾಯಿ ಅವರನ್ನು ಭೇಟಿ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ
ಬೆಂಗಳೂರು: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಂಗಳವಾರದಂದು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಕಾಪು: ಅದಮಾರು ಶ್ರೀಗಳಿಂದ ಗೋ ರುದ್ರಭೂಮಿ ನಿರ್ಮಾಣ ಕಾರ್ಯದ ಭೂಮಿ ಪೂಜೆ
ಕಾಪು: ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು ಶುಕ್ರವಾರದಂದು ಅದಮಾರು ಮಠದ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಕಾಮಗಾರಿಗೆ ಭೂಮಿ ಪೂಜೆ ಮಾಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ, ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಗೆ ಭೂಮಿ ಪೂಜೆ ಮೂಲಕ ಅಡಿಗಲ್ಲು […]
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಸನ್ಮಾನ
ಕಾಪು: ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಸುರೇಶ್ ಶೆಟ್ಟಿ ಗುರ್ಮೆ ಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಉದ್ಯಾವರ ವ್ಯಾಪ್ತಿಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಪಕ್ಷ ಪ್ರಚಾರ ಅಭಿಯಾನ
ಕಾಪು: ಇಲ್ಲಿನ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಬಿಲ್ಲವ ಸಮಾಜದ ಏಳಿಗೆಗಾಗಿ ಬಿಜೆಪಿ ಸರ್ಕಾರವು ಹಲವಾರು ಅನುದಾನಗಳನ್ನು ನೀಡಿದೆ, ಮೀನುಗಾರರಿಗೆ ಹಾಗೂ ಮೀನುಗಾರಿಕಾ ಕ್ಷೇತ್ರಕ್ಕೆ ಹಲವಾರು ಅನುದಾನಗಳನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ದಿಗೆ ವೇಗ ನೀಡಲಿದೆ. ಕ್ಷೇತ್ರಕ್ಕೆ ಗುರ್ಮೆ ಸುರೇಶ್ […]