ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿಗೆ ಅದ್ದೂರಿ ಸ್ವಾಗತ: ಜಿಲ್ಲಾಡಳಿತದಿಂದ ಸನ್ಮಾನ ಕಾರ್ಯಕ್ರಮ
ಉಡುಪಿ: ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು, ಜಿಲ್ಲೆಗೆ ಆಗಮಿಸಿದ ಕುಂದಾಪುರದ ಗುರುರಾಜ ಪೂಜಾರಿ ಅವರನ್ನು ಇಂದು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಜಿಲಾಧಿಕಾರಿ ಕೂರ್ಮಾರಾವ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಪೌರಾಯುಕ್ತ ಡಾ.ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ […]